ಯೆಹೆಜ್ಕೇಲನು 21:15 - ಪರಿಶುದ್ದ ಬೈಬಲ್15 ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರ ಹೃದಯವು ನೀರಾಗಿ ಬಹುಜನ ಎಡವಿಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ವಿುಂಚಿನಂತೆ ವಿುಂಚುತ್ತದೆ, ವಧೆಗಾಗಿ ಉಜ್ಜಿದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ. ಅಧ್ಯಾಯವನ್ನು ನೋಡಿ |
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.
“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.
ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.