ಯೆಹೆಜ್ಕೇಲನು 21:2 - ಪರಿಶುದ್ದ ಬೈಬಲ್2 “ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ, ಅಧ್ಯಾಯವನ್ನು ನೋಡಿ |
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.