ಯೆಹೆಜ್ಕೇಲನು 21:20 - ಪರಿಶುದ್ದ ಬೈಬಲ್20 ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ: