Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:22 - ಪರಿಶುದ್ದ ಬೈಬಲ್‌

22 “ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:22
17 ತಿಳಿವುಗಳ ಹೋಲಿಕೆ  

ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು.


ಅವನು ಮರದ ತೊಲೆಗಳನ್ನು ತಂದು ನಿನ್ನ ಗೋಡೆಗಳನ್ನು ಕೆಡವಿಬಿಡುವನು. ಗುದ್ದಲಿಗಳಿಂದ ನಿನ್ನ ಬುರುಜುಗಳನ್ನು ಕೆಡವಿಹಾಕುವನು.


ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.


ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.


ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ಯೆಹೋಶುವನು ಜನರಿಗೆ, “ಆರ್ಭಟಿಸಬೇಡಿರಿ, ನಾನು ಹೇಳುವ ದಿನದವರೆಗೆ ಒಂದು ಶಬ್ದವನ್ನೂ ಉಚ್ಚರಿಸಬೇಡಿರಿ. ಆಮೇಲೆ ನೀವು ಆರ್ಭಟಿಸಬಹುದು” ಎಂದು ಹೇಳಿದನು.


ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.


“ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.


ನೆಬೂಕದ್ನೆಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು