ಯೆಹೆಜ್ಕೇಲನು 21:23 - ಪರಿಶುದ್ದ ಬೈಬಲ್23 ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬೈಲಿಗೆ ತರಲು [ಅವನ ಕೈಗೆ] ಸಿಕ್ಕಿಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು. ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.