Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:24 - ಪರಿಶುದ್ದ ಬೈಬಲ್‌

24 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಅಪರಾಧಗಳು ಬೈಲಿಗೆ ಬಂದು ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು [ಪಾಪಿಗಳಾಗಿ] ನನ್ನ ನೆನಪಿಗೆ ಬಂದಿರಾದ ಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:24
20 ತಿಳಿವುಗಳ ಹೋಲಿಕೆ  

ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.


ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಯಾಕೆಂದರೆ ಆಕೆ ಸುರಿಸಿದ ರಕ್ತದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಬಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.


‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು