Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:28 - ಪರಿಶುದ್ದ ಬೈಬಲ್‌

28 ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:28
15 ತಿಳಿವುಗಳ ಹೋಲಿಕೆ  

ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.


ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು