Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:29 - ಪರಿಶುದ್ದ ಬೈಬಲ್‌

29 “‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 [ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:29
15 ತಿಳಿವುಗಳ ಹೋಲಿಕೆ  

ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.


ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.


ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’”


ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’”


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.


“ಇಸ್ರೇಲಿನಲ್ಲಿ ಇನ್ನು ಮೇಲೆ ಸುಳ್ಳುದರ್ಶನಗಳಿರುವುದಿಲ್ಲ; ಮುಖಸ್ತುತಿಯ ಕಣಿಯೂ ಇರುವುದಿಲ್ಲ.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.


ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು