ಯೆಹೆಜ್ಕೇಲನು 21:3 - ಪರಿಶುದ್ದ ಬೈಬಲ್3 ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”