Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:31 - ಪರಿಶುದ್ದ ಬೈಬಲ್‌

31 ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:31
19 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,


ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.


ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’” ಎಂದು ಹೇಳಿದನು.


ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.


ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”


ಅವನ ಪಟ್ಟಣದ ಗೋಡೆಗಳನ್ನು ಕೆಡವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲಾ ನಾಶಮಾಡಿದೆ.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು