4 ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.
ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.
“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’
“ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ನೋಡು, ಒಂದು ಖಡ್ಗ, ಹರಿತವಾದ ಖಡ್ಗ, ಆ ಖಡ್ಗವು ಉಜ್ಜಿ ಶುಭ್ರಮಾಡಲ್ಪಟ್ಟಿದೆ.
ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ, ಮಿಂಚಿನಂತೆ ಹೊಳೆಯುತ್ತಿದೆ. ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.