ಯೆಹೆಜ್ಕೇಲನು 21:7 - ಪರಿಶುದ್ದ ಬೈಬಲ್7 ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |