14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.
ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”
“‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”
ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.
ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.
ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.
ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”
ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”
ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.
“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.
ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.
ನೀನು ಆ ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಆ ಲೋಟವನ್ನು ಒಡೆದುಹಾಕುವೆ. ನಿನ್ನ ಸ್ತನಗಳನ್ನು ಬಗಿದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನ್ನು ಹೇಳುವದರಿಂದ ಇದು ನಡೆಯುವುದು.