Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:25 - ಪರಿಶುದ್ದ ಬೈಬಲ್‌

25 ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:25
30 ತಿಳಿವುಗಳ ಹೋಲಿಕೆ  

ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.


ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.


ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.


ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


“ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನ್ನ ಪರವಾಗಿ ಹೇಳಬೇಕು. ಅವರು ನಿಜವಾಗಿ ನನ್ನ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಬೇಕೆಂದು ಇಷ್ಟಪಡುತ್ತಾರೋ ಅದನ್ನೇ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನ್ನಬೇಕು, ‘ಯೆಹೋವನ ಸಂದೇಶವನ್ನು ಕೇಳಿರಿ.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


“ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?


ನೀವು ಕೊಬ್ಬಿದ ಕುರಿಯ ಮಾಂಸವನ್ನು ತಿನ್ನುತ್ತೀರಿ; ಅದರ ಉಣ್ಣೆಯಿಂದ ಬಟ್ಟೆಯನ್ನು ತಯಾರಿಸುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು