ಯೆಹೆಜ್ಕೇಲನು 22:29 - ಪರಿಶುದ್ದ ಬೈಬಲ್29 “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ. ಅಧ್ಯಾಯವನ್ನು ನೋಡಿ |