ಯೆಹೆಜ್ಕೇಲನು 22:4 - ಪರಿಶುದ್ದ ಬೈಬಲ್4 “‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.