ಯೆಹೆಜ್ಕೇಲನು 22:7 - ಪರಿಶುದ್ದ ಬೈಬಲ್7 ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.