ಯೆಹೆಜ್ಕೇಲನು 22:9 - ಪರಿಶುದ್ದ ಬೈಬಲ್9 ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.