ಯೆಹೆಜ್ಕೇಲನು 23:10 - ಪರಿಶುದ್ದ ಬೈಬಲ್10 ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವರು ಅವಳನ್ನು ಅವಮಾನಪಡಿಸಿ, ಅವಳ ಗಂಡು ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ, ಅವಳನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯನಿರ್ಣಯವಾಗುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವರು ಅವಳನ್ನು ಅವಮಾನಪಡಿಸಿ ಅವಳ ಗಂಡು ಹೆಣ್ಣುಮಕ್ಕಳನ್ನು ಎತ್ತಿಕೊಂಡು ಹೋಗಿ ಅವಳನ್ನು ಖಡ್ಗದಿಂದ ಸಂಹರಿಸಿದರು. ಇವರು ಅವಳಿಗೆ ದಂಡನೆಮಾಡಿದ್ದರಿಂದ ಹೆಂಗಸರಲ್ಲಿ ಅವಳಿಗೆ ಕೆಟ್ಟಹೆಸರು ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು. ಅಧ್ಯಾಯವನ್ನು ನೋಡಿ |
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.