Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:18 - ಪರಿಶುದ್ದ ಬೈಬಲ್‌

18 “ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಬಳು ಮಾಡಿದಳು. ಆಕೆಯು ತನ್ನ ನಗ್ನ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವಳು ಮುಚ್ಚುಮರೆಯಿಲ್ಲದೆ ಸೂಳೆತನಮಾಡಿ ತನ್ನ ಮಾನವನ್ನು ಕೆಡಿಸಿಕೊಂಡಾಗ ನನ್ನ ಅನುರಾಗವು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನ್ನು ಬಯಲು ಪಡಿಸಿಕೊಂಡಾಗ, ತನ್ನ ಜಿಗುಪ್ಸೆ ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:18
20 ತಿಳಿವುಗಳ ಹೋಲಿಕೆ  

ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.


ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!


ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಅತಿಯಾದ ಶರೀರದಾಶೆಯಿಂದಾಗಿ, ನಿನ್ನ ಬೆತ್ತಲೆಯ ದೇಹವನ್ನು ನೋಡಿ ನಿನ್ನೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ನೀನು ನಿನ್ನ ಪ್ರಿಯತಮರಿಗೂ, ನಿನ್ನ ಹೊಲಸು ದೇವರುಗಳಿಗೂ ಅವಕಾಶ ಮಾಡಿಕೊಟ್ಟೆ. ನೀನು ನಿನ್ನ ಮಕ್ಕಳನ್ನು ಕೊಂದು ಅವರ ರಕ್ತವನ್ನು ಸುರಿಸಿರುವೆ. ಇದು ಆ ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ.


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


“ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.


ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. ನೀವು ಆ ದೇವರುಗಳನ್ನು ಪ್ರೀತಿಸುತ್ತೀರಿ. ಅವುಗಳ ಬೆತ್ತಲೆ ಶರೀರಗಳನ್ನು ನೋಡುವದರಲ್ಲಿ ಸಂತೋಷಿಸುವಿರಿ. ನೀವು ನನ್ನೊಂದಿಗೆ ಇದ್ದಿರಿ. ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. ಅನಂತರ ನೀವು ಹೋಗಿ ಆ ಸುಳ್ಳುದೇವರೊಂದಿಗೆ ಒಪ್ಪಂದ ಮಾಡುತ್ತೀರಿ.


ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು.


ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.


ಮತ್ತೆಮತ್ತೆ ಒಹೊಲೀಬಳು ನನಗೆ ಅಪನಂಬಿಗಸ್ತಳಾದಳು. ಆಕೆಯು ಯುವತಿಯಾಗಿದ್ದಾಗ ಈಜಿಪ್ಟಿನಲ್ಲಿ ತಾನು ಮಾಡಿಕೊಂಡಿದ್ದ ಅನೈತಿಕ ಸಂಬಂಧಗಳನ್ನು ನೆನಪುಮಾಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು