ಯೆಹೆಜ್ಕೇಲನು 23:22 - ಪರಿಶುದ್ದ ಬೈಬಲ್22 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಬಳೇ, ನಿನ್ನ ಪ್ರಿಯತಮರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದುಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗಿರಲು, ಒಹೊಲೀಬಳೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ಯಾವ ಮಿಂಡರಿಂದ ನಿನ್ನ ಆಸೆ ತೊಲಗಿತೋ ಆ ಮಿಂಡರನ್ನು ಅಂದರೆ, ಮನೋಹರ ಯುವಕರು, ಎಲ್ಲ ನಾಯಕ ಉಪನಾಯಕರು, ಪ್ರಭುಪ್ರಧಾನರು, ಅಶ್ವಾರೂಢರು ಆದ ಬಾಬಿಲೋನಿನವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಆದ್ದರಿಂದ ಒಹೊಲೀಬಳೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಯಾರಿಂದ ನಿನ್ನ ಮನಸ್ಸಿನಲ್ಲಿ ಜಿಗುಪ್ಸೆ ಹುಟ್ಟಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ವಿರೋಧವಾಗಿ ತರುತ್ತೇನೆ. ಅಧ್ಯಾಯವನ್ನು ನೋಡಿ |