ಯೆಹೆಜ್ಕೇಲನು 23:24 - ಪರಿಶುದ್ದ ಬೈಬಲ್24 ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಅಧ್ಯಾಯವನ್ನು ನೋಡಿ |