ಯೆಹೆಜ್ಕೇಲನು 23:27 - ಪರಿಶುದ್ದ ಬೈಬಲ್27 ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೀಗೆ ನಾನು ನಿನ್ನ ಪುಂಡಾಟವನ್ನೂ ನೀನು ಐಗುಪ್ತದಲ್ಲಿದ್ದಂದಿನಿಂದ ನಡೆದು ಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ. ಅಧ್ಯಾಯವನ್ನು ನೋಡಿ |