Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:37 - ಪರಿಶುದ್ದ ಬೈಬಲ್‌

37 ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ, ತಮ್ಮ ಬೊಂಬೆಗಳಿಂದ ವ್ಯಭಿಚಾರಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ಬೊಂಬೆಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:37
30 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಅತಿಯಾದ ಶರೀರದಾಶೆಯಿಂದಾಗಿ, ನಿನ್ನ ಬೆತ್ತಲೆಯ ದೇಹವನ್ನು ನೋಡಿ ನಿನ್ನೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ನೀನು ನಿನ್ನ ಪ್ರಿಯತಮರಿಗೂ, ನಿನ್ನ ಹೊಲಸು ದೇವರುಗಳಿಗೂ ಅವಕಾಶ ಮಾಡಿಕೊಟ್ಟೆ. ನೀನು ನಿನ್ನ ಮಕ್ಕಳನ್ನು ಕೊಂದು ಅವರ ರಕ್ತವನ್ನು ಸುರಿಸಿರುವೆ. ಇದು ಆ ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ.


ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.


ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”


ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”


“ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”


ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ನೀನು ನಿನ್ನ ತಾಯಿಯ ಮಗಳು. ನೀನು ನಿನ್ನ ಗಂಡನನ್ನು ಮತ್ತು ಮಕ್ಕಳನ್ನು ತಿರಸ್ಕರಿಸಿರುವೆ. ನೀನು ನಿನ್ನ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನ್ನೂ ಮಕ್ಕಳನ್ನೂ ತಿರಸ್ಕರಿಸಿದಿರಿ. ನೀವು ನಿಮ್ಮನ್ನು ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.


ವ್ಯಭಿಚಾರಿಣಿಯೇ, ನೀನು ನಿನ್ನ ಸ್ವಂತ ಗಂಡನಿಗಿಂತ ಪರಪುರುಷನನ್ನೇ ಹೆಚ್ಚಾಗಿ ಆಶಿಸುವವಳಾಗಿರುವೆ.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು