Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:39 - ಪರಿಶುದ್ದ ಬೈಬಲ್‌

39 ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ತಮ್ಮ ಮಕ್ಕಳನ್ನು ಕೊಂದು ತಮ್ಮ ಬೊಂಬೆಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಹೊಲೆಗೈದರು; ಇಗೋ, ನನ್ನ ಮಂದಿರದ ನಟ್ಟನಡುವೆ ಇದನ್ನು ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:39
15 ತಿಳಿವುಗಳ ಹೋಲಿಕೆ  

ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


“ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು.


“ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು