40 “ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.
40 “ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.
ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.
ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.
ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕ್ರಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು.
“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.