ಯೆಹೆಜ್ಕೇಲನು 23:41 - ಪರಿಶುದ್ದ ಬೈಬಲ್41 ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿರುವೆ. ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ. ಅಧ್ಯಾಯವನ್ನು ನೋಡಿ |
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.