ಯೆಹೆಜ್ಕೇಲನು 23:46 - ಪರಿಶುದ್ದ ಬೈಬಲ್46 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಕೂಡಿಸಿ ಇವರನ್ನು ಸೂರೆಗೆ ಸಿಕ್ಕಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು. ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.