ಯೆಹೆಜ್ಕೇಲನು 23:48 - ಪರಿಶುದ್ದ ಬೈಬಲ್48 ಈ ರೀತಿ, ನಾನು ಅವರ ಅವಮಾನಕರವಾದ ನಡತೆಯನ್ನು ದೇಶದಿಂದ ತೆಗೆದುಹಾಕುವೆನು. ಬೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಬಾರದೆಂದು ಎಚ್ಚರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಹೀಗೆ ನಾನು ನಾಡಿನೊಳಗಿಂದ ಲಂಪಟತನವನ್ನು ತೊಲಗಿಸುವೆನು; ಇದರಿಂದ ಸಮಸ್ತ ಮಹಿಳೆಯರಿಗೂ ನಿಮ್ಮ ಲಂಪಟತನವನ್ನೂ ಅನುಸರಿಸಬಾರದೆಂಬ ಬುದ್ಧಿ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 “ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.