ಯೆಹೆಜ್ಕೇಲನು 23:9 - ಪರಿಶುದ್ದ ಬೈಬಲ್9 ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದಕಾರಣ ನಾನು ಅವಳನ್ನು ಅವಳ ವಿುಂಡರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.