Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:10 - ಪರಿಶುದ್ದ ಬೈಬಲ್‌

10 ಹಂಡೆಯಡಿಯಲ್ಲಿ ತುಂಬಾ ಸೌದೆಯನ್ನು ಇಡು. ಬೆಂಕಿಯನ್ನು ಹಚ್ಚು. ಮಾಂಸವು ಬೇಯುವತನಕ ಬೇಯಿಸು. ಮೂಳೆಗಳು ಸುಟ್ಟುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಬೆಂದುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಹೊತ್ತಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:10
7 ತಿಳಿವುಗಳ ಹೋಲಿಕೆ  

ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.


ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.


ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು.


“‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರಿಂದ ತುಂಬಿದ್ದ ನಗರಕ್ಕೆ ಕೇಡು ಉಂಟಾಗುವದು. ನಾನು ಸೌದೆಯ ಗುಡ್ಡೆಯನ್ನು ದೊಡ್ಡದು ಮಾಡುವೆನು.


ಬರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾಮ್ರವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿಹೋಗಲಿ. ಮತ್ತು ಅದರ ಕಿಲುಬು ಸುಟ್ಟುಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು