ಯೆಹೆಜ್ಕೇಲನು 24:11 - ಪರಿಶುದ್ದ ಬೈಬಲ್11 ಬರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾಮ್ರವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿಹೋಗಲಿ. ಮತ್ತು ಅದರ ಕಿಲುಬು ಸುಟ್ಟುಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.