Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:12 - ಪರಿಶುದ್ದ ಬೈಬಲ್‌

12 “‘ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಬಲು ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:12
19 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.


ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು