ಯೆಹೆಜ್ಕೇಲನು 24:13 - ಪರಿಶುದ್ದ ಬೈಬಲ್13 “‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ. ಅಧ್ಯಾಯವನ್ನು ನೋಡಿ |
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”