ಯೆಹೆಜ್ಕೇಲನು 24:16 - ಪರಿಶುದ್ದ ಬೈಬಲ್16 “ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿಂದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.