ಯೆಹೆಜ್ಕೇಲನು 24:17 - ಪರಿಶುದ್ದ ಬೈಬಲ್17 ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.” ಅಧ್ಯಾಯವನ್ನು ನೋಡಿ |
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.