ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.
ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.
ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.