Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:24 - ಪರಿಶುದ್ದ ಬೈಬಲ್‌

24 ಯೆಹೆಜ್ಕೇಲನು ನಿಮಗೆ ಒಬ್ಬ ಮಾದರಿಯಾಗಿದ್ದಾನೆ. ಆತನು ಮಾಡಿದ ಹಾಗೆ ನೀವೂ ಮಾಡುವಿರಿ. ನಿಮ್ಮ ಶಿಕ್ಷಾ ಸಮಯವು ಹತ್ತಿರ ಬಂದಿದೆ. ನಾನು ಒಡೆಯನಾದ ಯೆಹೋವನೆಂದು ಆಗ ನೀವು ತಿಳಿಯುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 [ಯೆಹೋವನ ಈ ಮಾತನ್ನು ಕೇಳಿರಿ -] ಈ ವಿಷಯದಲ್ಲಿ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು, ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:24
24 ತಿಳಿವುಗಳ ಹೋಲಿಕೆ  

ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.


‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’


ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”


ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.


ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.


ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.


ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.


ಆದರೆ ನನ್ನ ಕುರಿತು ಹೇಳುವುದಕ್ಕೆ ನಿಮಗೆ ಅದು ಸುಸಂದರ್ಭವಾಗಿರುವುದು.


ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.


ಹೀಗೆ ನಾನು ಮೋವಾಬನ್ನು ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”


ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”


“‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”


ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.


ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ.


“ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”


ಇಸ್ರೇಲ್ ಜನಾಂಗಗಳೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಕೃತ್ಯಗಳಿಗಾಗಿ ನೀವು ನಾಶವಾಗಿ ಹೋಗಬೇಕಾಗಿತ್ತು. ಆದರೆ ನನ್ನ ಒಳ್ಳೆಯ ಹೆಸರಿನ ಸಲುವಾಗಿ ನೀವು ಹೊಂದಬೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಧಿಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು