25-26 ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.
ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.
“ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.
ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.
ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು.