ಯೆಹೆಜ್ಕೇಲನು 24:5 - ಪರಿಶುದ್ದ ಬೈಬಲ್5 ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಬೇಯಿಸು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.