Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:6 - ಪರಿಶುದ್ದ ಬೈಬಲ್‌

6 “‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:6
33 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.


ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.


ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.


ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು.


“‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರಿಂದ ತುಂಬಿದ್ದ ನಗರಕ್ಕೆ ಕೇಡು ಉಂಟಾಗುವದು. ನಾನು ಸೌದೆಯ ಗುಡ್ಡೆಯನ್ನು ದೊಡ್ಡದು ಮಾಡುವೆನು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಹೌದು, ಈ ಸ್ಥಳವು ಬೇಯಿಸುವ ಪಾತ್ರೆ ಮತ್ತು ನೀವು ಆ ಪಾತ್ರೆಯಲ್ಲಿ ಬೇಯಿಸಲ್ಪಡುವ ಮಾಂಸವಾಗಿರುತ್ತೀರಿ. ನಾನು ನಿಮ್ಮನ್ನು ಇಸ್ರೇಲಿನಲ್ಲಿಯೇ ಶಿಕ್ಷಿಸುವೆನು.


ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲುಬಂಡೆಗಳನ್ನು ಸರಿಸಿ ಆ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು.


ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.


‘ಮನೆಗಳನ್ನು ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ’ ಎಂದು ಸುಳ್ಳು ಹೇಳುತ್ತಿದ್ದಾರೆ.


ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.


ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.


ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು.


ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು