ಯೆಹೆಜ್ಕೇಲನು 25:1 - ಪರಿಶುದ್ದ ಬೈಬಲ್1 ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.