ಯೆಹೆಜ್ಕೇಲನು 25:12 - ಪರಿಶುದ್ದ ಬೈಬಲ್12 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಎದೋಮು ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿತೀರಿಸಿ ಮಹಾಪರಾಧವನ್ನು ನಡಿಸಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು. ಅಧ್ಯಾಯವನ್ನು ನೋಡಿ |
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.