Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:13 - ಪರಿಶುದ್ದ ಬೈಬಲ್‌

13 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:13
29 ತಿಳಿವುಗಳ ಹೋಲಿಕೆ  

ಆದ್ದರಿಂದ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನ್ನು ತರುವೆನು. ನಾನು ನಿನ್ನ ಜನರನ್ನೂ ಪ್ರಾಣಿಗಳನ್ನೂ ಸಂಪೂರ್ಣವಾಗಿ ಸಂಹರಿಸುವೆನು.


ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.


ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.


ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.


ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.


ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”


ರೋಧೆ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.


“ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಬೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಬಂಜರು ಭೂಮಿಯನ್ನಾಗಿ ಮಾಡುವೆನು.


ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿದುಕೊಳ್ಳುತ್ತಿ.”


“ಶೆಬ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಬಂದಿರುವಿಯಾ? ಬೆಳ್ಳಿಬಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಬಂದಿರುವೆಯಾ?’” ಎಂದು ವಿಚಾರಿಸುವರು.


ದೆದಾನಿನ ನಿನ್ನ ಜನರು ಒಳ್ಳೆಯ ವ್ಯಾಪಾರಸ್ಥರು. ಅವರು ಸವಾರಿ ಕುದುರೆಗಳನ್ನೂ ಜೇನನ್ನೂ ಬಟ್ಟೆಗಳನ್ನೂ ಕೊಟ್ಟು ಕೊಂಡುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು