14 ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.
14 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
14 ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”
14 ನಾನು ಎದೋವಿುಗೆ ನನ್ನ ಜನರಾದ ಇಸ್ರಾಯೇಲ್ಯರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋವಿುನ ಅನುಭವಕ್ಕೆ ಬರುವದು; ಇದು ಕರ್ತನಾದ ಯೆಹೋವನ ನುಡಿ.
14 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.
ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:
ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.
“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”
ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.