Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:4 - ಪರಿಶುದ್ದ ಬೈಬಲ್‌

4 ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯ ಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು ನಿನ್ನ ಹಾಲನ್ನು ಕುಡಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:4
17 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.


ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.


ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ಪೂರ್ವದಿಕ್ಕಿನ ಜನರು ಮೋವಾಬನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನ್ನು ಮರೆತುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು