ಯೆಹೆಜ್ಕೇಲನು 25:5 - ಪರಿಶುದ್ದ ಬೈಬಲ್5 “‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ: