ಯೆಹೆಜ್ಕೇಲನು 25:6 - ಪರಿಶುದ್ದ ಬೈಬಲ್6 ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ, ಅಧ್ಯಾಯವನ್ನು ನೋಡಿ |
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.