ಯೆಹೆಜ್ಕೇಲನು 26:15 - ಪರಿಶುದ್ದ ಬೈಬಲ್15 ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ - ನಿನ್ನ ಮಧ್ಯದಲ್ಲಿ ಕೊಲೆಯುಂಟಾಗಿ ಗಾಯಪಟ್ಟವರು ನರಳುತ್ತಿರಲು ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ? ಅಧ್ಯಾಯವನ್ನು ನೋಡಿ |
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.