ಯೆಹೆಜ್ಕೇಲನು 26:17 - ಪರಿಶುದ್ದ ಬೈಬಲ್17 ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ? ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.